• March 28, 2022

ನಿಶ್ಚಿತಾರ್ಥ ಮಾಡಿಕೊಂಡ ನಿಕ್ಕಿ ಗಲ್ರಾನಿ

ನಿಶ್ಚಿತಾರ್ಥ ಮಾಡಿಕೊಂಡ ನಿಕ್ಕಿ ಗಲ್ರಾನಿ

ನಟಿ ಸಂಜನಾ ಗಲ್ರಾನಿ ತಂಗಿ ನಿಕ್ಕಿ ಗಲ್ರಾನಿ ಸಿಹಿ ಸುದ್ದಿ ನೀಡಿದ್ದಾರೆ. ನಿಕ್ಕಿ ಗಲ್ರಾನಿ ದಾಂಪತ್ಯ ಜೀವನಕ್ಕೆ ಕಾಲಿರಿಸಲಿದ್ದು ಇತ್ತೀಚೆಗಷ್ಟೇ ತೆಲುಗು ಹಾಗೂ ತಮಿಳಿನ ಖ್ಯಾತ ನಟ ಆದಿ ಪಿನಿಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎರಡು ವರ್ಷಗಳಿಂದ. ಪ್ರೀತಿಸುತ್ತಿದ್ದ ಈ ಜೋಡಿ ಇದೀಗ ಬಹಳ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದೆ. ವಿಶೇಷವೆಂದರೆ ಕಳೆದ ಎರಡು ವರ್ಷಗಳಿಂದ ಇವರಿಬ್ಬರೂ ಪ್ರೀತಿ ಮಾಡುತ್ತಿದ್ದರೂ ಎಲ್ಲಿಯೂ ಈ ವಿಚಾರ ಬಹಿರಂಗ ಮಾಡಿರಲಿಲ್ಲ. ಈಗ ತಮ್ಮ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ.

ಈ ಸಂತಸದ ವಿಚಾರವನ್ನು ಸೋಶಿಯಲ್ ಮೀಡಿಯಾ ದಲ್ಲಿ ಹಂಚಿಕೊಂಡಿದ್ದಾರೆ ನಿಕ್ಕಿ ಗಲ್ರಾನಿ. ನಿಶ್ಚಿತಾರ್ಥದ ಫೋಟೋ ಹಂಚಿಕೊಂಡಿರುವ ಆಕೆ “ನನ್ನ ಜೀವನದಲ್ಲಿ ಇದೊಂದು ಅತ್ಯಮೂಲ್ಯವಾದ ಕ್ಷಣ. ಎರಡು ವರ್ಷಗಳಿಂದ ಪ್ರೀತಿಸುತ್ತಿರುವ ನಾವು ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದೇವೆ.
ಇನ್ನು ಈಗಾಗಲೇ ಕುಟುಂಬಸ್ಥರ, ಗುರುಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ಸದಾ ನಮ್ಮ ಮೇಲೆ ಇರಲಿ” ಎಂದಿದ್ದಾರೆ.

ಅತಿ ಶೀಘ್ರದಲ್ಲೇ ಹಸೆಮಣೆ ಏರಲಿರುವ ಈ ಜೋಡಿ “ಯಾಗವರಾಯಿನುಮ್ ನಾ ಕಾಕ್ಕಾ” ಹಾಗೂ ಮರಗಧ ನಾನಯಮ್ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಸದ್ಯ ಇಬ್ಬರೂ ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ.