• November 30, 2021

ಕಿಚ್ಚ ಸುದೀಪ್ ಗಾಗಿ ಗುಡಿ ಕಟ್ಟಿದ ಅಭಿಮಾನಿಗಳು!

ಕಿಚ್ಚ ಸುದೀಪ್ ಗಾಗಿ ಗುಡಿ ಕಟ್ಟಿದ ಅಭಿಮಾನಿಗಳು!

ಕಿಚ್ಚ ಸುದೀಪ್ ಕನ್ನಡದ ಗಡಿಯಾಚೆಗೂ ಪಡೆದಿರುವ ನಟ ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೇ ಟಾಲಿವುಡ್ ಕಾಲಿವುಡ್ ಬಾಲಿವುಡ್ ಹಾಗೂ ಹಾಲಿವುಡ್ ನಲ್ಲೂ ನಟಿಸಿ ಸೈ ಎನ್ನಿಸಿಕೊಂಡಿರುವ ಕನ್ನಡದ ಕಲಾವಿದ …

ಕನ್ನಡದಲ್ಲಿ ಮಾತ್ರವಲ್ಲದೇ ಅನ್ಯ ಭಾಷೆಯಲ್ಲಿ ಕೂಡ ಕಿಚ್ಚ ಸುದೀಪ್ ಅಪಾರ ಅಭಿಮಾನಿಗಳನ್ನ ಸಂಪಾದಿಸಿದ್ದಾರೆ ಸಿನಿಮಾ ಮೂಲಕ ಪ್ರತಿಯೊಬ್ಬರ ನಾ ರಂಜಿಸುತ್ತಾ ಸಮಾಜಸೇವೆಯನ್ನು ಮಾಡುತ್ತಾ ಬಂದಿರುವ ಕಿಚ್ಚ ಸುದೀಪ್ ಗೆ ಈಗ ದೇವಸ್ಥಾನ ನಿರ್ಮಾಣ ಮಾಡಿ ಗೌರವ ಅರ್ಪಿಸುತ್ತಿದ್ದಾರೆ …

ರಾಯಚೂರಿನ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮೂರ್ತಿ ನಿರ್ಮಿಸಿ ಗುಡಿಯೊಂದನ್ನು ಕಟ್ಟುತ್ತಿದ್ದಾರೆ… ಕನ್ನಡದ ನಟನಿಗಾಗಿ ಕಟ್ಟಿದ ಈ ಮೊದಲ ಗುಡಿ ಇದಾಗಿದೆ…ಕಿಚ್ಚ ಸುದೀಪ್ ಗುಡಿಯನ್ನು ಸುದೀಪ್ ಅಭಿಮಾನಿಗಳು ಕಳೆದ ಮೂರು ತಿಂಗಳಿಂದ ನಿರ್ಮಾಣ ಮಾಡುತ್ತಿದ್ದಾರೆ. ಮೊದಲು ರಾಯಚೂರು ಜಿಲ್ಲೆಯ, ದೇವದುರ್ಗ ತಾಲೂಕಿನ ಕುರುಕುಂದ ಗ್ರಾಮದ ಜನರು ವಾಲ್ಮೀಕಿ ಗುಡಿ ಕಟ್ಟಲು ಮುಂದಾಗಿದ್ದರು. ಆ ವೇಳೆ ಕಿಚ್ಚನ ಅಭಿಮಾನಿಗಳು ಕಿಚ್ಚ ಸುದೀಪ್‌ಗೆ ಗುಡಿ ಕಟ್ಟಬೇಕು ಎಂದು ನಿರ್ಧರಿಸಿದ್ದರು. ತಮ್ಮ ಜನಾಂಗದ ನಾಯಕ ನಟನ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಅವರಿಗಾಗಿ ಗುಡಿ ನಿರ್ಮಾಣ ಮಾಡೋಣ ಎಂದು ಈಗ ಗುಡಿ ಕಟ್ಟಿದ್ದಾರೆ….12ಲಕ್ಷ ವೆಚ್ಚದಲ್ಲಿ ಗುಡಿ ನಿರ್ಮಾಣ ಮಾಡಿದ್ದು ಗುಡಿಯ ಕಾವಲಿಗೆ ವಾಚ್ ಮ್ಯಾನ್ ಕೂಡ ನೇಮಕ ಮಾಡಿದ್ದಾರೆ ಅಭಿಮಾನಿಗಳು..