• April 7, 2022

ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಹೊಸ ಪ್ರತಿಭೆಗಳಿಗೆ ಶುಭಹಾರೈಸಿದ ಕಿಚ್ಚ

ಸಿನಿಮಾದ ಟೀಸರ್ ಬಿಡುಗಡೆ ಮಾಡಿ ಹೊಸ ಪ್ರತಿಭೆಗಳಿಗೆ ಶುಭಹಾರೈಸಿದ ಕಿಚ್ಚ

ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದರಲ್ಲಿ ಸುದೀಪ್ ಯಾವಾಗಲೂ ಮುಂದೆ ಇರುತ್ತಾರೆ. ಹಲವು ಯುವ ಪ್ರತಿಭೆಗಳಿಗೆ ಬೆಂಬಲ ನೀಡುವ ಸುದೀಪ್ ಈಗ ಬಡಿಗೇರ್ ದೇವೇಂದ್ರ ನಿರ್ದೇಶನದ “ಇನ್” ಚಿತ್ರಕ್ಕೆ ಶುಭ ಕೋರಿದ್ದಾರೆ.

ಪ್ರಯೋಗಾತ್ಮಕ ಚಿತ್ರವಾಗಿರುವ” ಇನ್ ” ನ ಟೀಸರ್ ನ್ನು ಸುದೀಪ್ ಬಿಡುಗಡೆ ಮಾಡಿದ್ದು ಟೀಸರ್ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರಕ್ಕೆ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.

ಇನ್ ಚಿತ್ರದಲ್ಲಿ ಪಾವನಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಈ ಹಿಂದೆ ರುದ್ರಿ ಎಂಬ ಮಹಿಳಾ ಪ್ರಧಾನ ಚಿತ್ರ ನಿರ್ದೇಶಿಸಿದ್ದ ಬಡಿಗೇರ್ ದೇವೇಂದ್ರ ಈ ಬಾರಿಯೂ ಮಹಿಳಾ ಪ್ರಧಾನ ಚಿತ್ರ ನಿರ್ದೇಶಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡಿರುವ ಬಡಿಗೇರ್ ” ಈ ಚಿತ್ರ ಕೊರೋನಾ ಲಾಕ್ ಡೌನ್ ನಲ್ಲಿ ಸಿದ್ಧವಾದ ಪ್ರಯೋಗಾತ್ಮಕ ಚಿತ್ರ ಆಗಿದೆ. ಕನ್ನಡ ಚಿತ್ರರಂಗದಲ್ಲಿ ಈ ರೀತಿಯ ಪ್ರಯತ್ನಗಳು ಕಡಿಮೆ. ಕಿಚ್ಚ ಸುದೀಪ್ ಅವರು ನಮ್ಮನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡಿದ್ದಾರೆ” ಎಂದಿದ್ದಾರೆ.

ಈ ಚಿತ್ರಕ್ಕೆ ಭರತ್ ನಾಯಕ್ ಸಂಗೀತ ನಿರ್ದೇಶನ ಇದ್ದು ಬಡಿಗೇರ್ ದೇವೇಂದ್ರ ಸಾಹಿತ್ಯ ಬರೆದಿದ್ದಾರೆ. ಶಂಕರ್ ಪಾಗೋಜಿ ಚಿತ್ರಕಥೆ ಸಂಭಾಷಣೆ ಬರೆದಿದ್ದಾರೆ.