• March 16, 2022

ಬಣ್ಣದ ಲೋಕದಲ್ಲಿ ಮುಂದಿನ ಹಂತಕ್ಕೆ ಭಡ್ತಿ ಪಡೆದ ಮೇಘಾ ಶೆಟ್ಟಿ..

ಬಣ್ಣದ ಲೋಕದಲ್ಲಿ ಮುಂದಿನ ಹಂತಕ್ಕೆ ಭಡ್ತಿ ಪಡೆದ ಮೇಘಾ ಶೆಟ್ಟಿ..

ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಾಯಕಿ ಅನು ಸಿರಿಮನೆ ಪಾತ್ರದಲ್ಲಿ ನಟಿಸುವ ಮೂಲಕ ಕಿರುತೆರೆಗೆ ಪ್ರವೇಶ ಮಾಡಿದ ಕರಾವಳಿ ಕುವರಿ ಮೇಘಾ ಶೆಟ್ಟಿ ತಮ್ಮ ಮುದ್ದಾದ ಅಭಿನಯದಿಂದ ಜನರ ಮನಗೆದ್ದ ಚೆಲುವೆ. ಕಿರುತೆರೆಯಲ್ಲಿ ಕಡಿಮೆ ಅವಧಿಯಲ್ಲಿ ಖ್ಯಾತಿ ಗಳಿಸಿರುವ ಮೇಘಾ ಈಗ ನಿರ್ಮಾಪಕಿಯಾಗುತ್ತಿದ್ದಾರೆ. ಇಷ್ಟು ದಿನ ನಟಿಯಾಗುಇ ಕರುನಾಡಿನಾದ್ಯಂತ ಮನೆ ಮಾತಾಗಿರುವ ಮೇಘಾ ಶೆಟ್ಟಿ ಇದೀಗ ನಿರ್ಮಾಪಕಿಯಾಗಿ ಭಡ್ತಿ ಪಡೆಯಲಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಆರಂಭವಾಗಲಿರುವ ಹೊಚ್ಚ ಹೊಸ ಧಾರಾವಾಹಿ ಕೆಂಡಸಂಪಿಗೆಯ ನಿರ್ಮಾಪಕಿಯಾಗಿ ಮೇಘಾ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಮೂಲಗಳಿಂದ ತಿಳಿದು ಬಂದಿದೆ. ಈ ವಿಚಾರ ತಿಳಿದ ಅಭಿಮಾನಿಗಳು ಇದೇನು ಇಷ್ಟು ಬೇಗ ಧಾರಾವಾಹಿ ನಿರ್ಮಾಣ ಮಾಡುವಷ್ಟು ಬೆಳೆದು ನಿಂತಿದ್ದಾರೆ. ಅದೃಷ್ಟ ಎಂದರೆ ಹೀಗಿರಬೇಕು ಎಂದೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.

ಮೊದಲ ಧಾರಾವಾಹಿಯಲ್ಲಿಯೇ ನಾಯಕಿಯಾಗಿ ನಟಿಸುವ ಸುವರ್ಣಾವಕಾಶ ಪಡೆದುಕೊಂಡಿರುವ ಮೇಘಾ ಶೆಟ್ಟಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ನಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು‌. ದಿಲ್ ಪಸಂದ್ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆಗೆ ತೆರೆ ಹಂಚಿಕೊಳ್ಳಲಿರುವ ಮೇಘಾ ಶೆಟ್ಟಿ ಆಲ್ಬಂ ಹಾಡಿನಲ್ಲಿ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದಾರೆ. ಎಂ ಕೆ ಆರ್ಟ್ಸ್ ಲಾಂಛನದಲ್ಲಿ ಮೋನಿಕಾ ಕಲ್ಲೂರಿ ನಿರ್ಮಾಣ ಮಾಡಿರುವ ನೋಡು ಶಿವ ಆಲ್ಬಂ ಸಾಂಗ್ ನಲ್ಲಿ ಈಕೆ ಹೆಜ್ಜೆ ಹಾಕಿದ್ದು ನೆಟ್ಟಿಗರು ಫಿದಾ ಆಗಿದ್ದಾರೆ‌