• July 10, 2022

ಟೈಗರ್ ಶ್ರಾಫ್ ಜೊತೆ ರಶ್ಮಿಕಾ ಮಂದಣ್ಣ

ಟೈಗರ್ ಶ್ರಾಫ್ ಜೊತೆ ರಶ್ಮಿಕಾ ಮಂದಣ್ಣ

ರಶ್ಮಿಕಾ ಮಂದಣ್ಣ ಮತ್ತೊಂದು ಹಿಂದಿ ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿದೆ. ಅದೂ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರೊಂದಿಗೆ ನಟಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.

ತೆಲುಗು, ತಮಿಳು ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದ ರಶ್ಮಿಕಾ ಇದೀಗ ಬಾಲಿವುಡ್‌ ನತ್ತ ಚಿತ್ತ ನೆಟ್ಟಿದ್ದಾರೆ. ಹಿಂದಿಯಲ್ಲಿ ರಶ್ಮಿಕಾ ಮಂದಣ್ಣ ತಮ್ಮ ಮೊದಲ ಸಿನಿಮಾ ರಿಲೀಸ್ ಆಗುವ ಮೊದಲೇ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಸಹಿ ಹಾಕಿದ್ದಾರೆ. ಈಗಾಗಲೇ ರಶ್ಮಿಕಾ ಹಿಂದಿಯಲ್ಲಿ ಅಧಿಕೃತವಾಗಿ ಮೂರು ಸಿನಿಮಾಗಳನ್ನು ಘೋಷಣೆ ಮಾಡಿದ್ದಾರೆ.

ಎರಡು ಸಿನಿಮಾಗಳ ಚಿತ್ರೀಕರಣ ಮುಗಿಸಿ ಇದೀಗ ಮೂರನೇ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ರಶ್ಮಿಕಾ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ. ರಶ್ಮಿಕಾ ಬಾಲಿವುಡ್ ನಟ ಟೈಗರ್ ಶ್ರಾಫ್ ಜೊತೆ ನಟಿಸಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ನಿರ್ದೇಶಕ ಶಶಾಂಕ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಹೊಸ ಸಿನಿಮಾದಲ್ಲಿ ಟೈಗರ್ ಶ್ರಾಫ್‌ ಜೊತೆ ನಟಿಸಲು ನಟಿಯ ಹುಡುಕಾಟ ನಡೆಯುತ್ತಿತ್ತು. ಬಹುತೇಕ ಟೈಗರ್ ಶ್ರಾಫ್ ಜೊತೆ ನಟಿಸಲು ರಶ್ಮಿಕಾ ಅವರೇ ಫಿಕ್ಸ್ ಎನ್ನಲಾಗಿದೆ.

ಟೈಗರ್ ಶ್ರಾಫ್ ವಿಭಿನ್ನವಾಗಿ ಕಾಣಿಸಿಕೊಳ್ಳಲಿರುವ ಈ ಚಿತ್ರ ಇನ್ನೇನು ಶೂಟಿಂಗನ್ನು ಆರಂಭಿಸಲಿದೆ. ಸದ್ಯಕ್ಕೆ ರಶ್ಮಿಕಾ ಹಿಂದಿಯ ಅನಿಮಲ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ರಣಬೀರ್ ಕಪೂರ್ ನಟನೆಯ ಈ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಸಾಕಷ್ಟು ಚಿತ್ರೀಕರಣವನ್ನು ಮುಗಿಸಿದ್ದಾರೆ. ಇದರೊಂದಿಗೆ ತಮಿಳು ಸ್ಟಾರ್ ದಳಪತಿ ವಿಜಯ್ ಜೊತೆ ನಟಿಸುತ್ತಿರುವ ರಶ್ಮಿಕಾ ಎರಡು ಸಿನಿಮಾಗಳನ್ನು ಬ್ಯಾಲೆನ್ಸ್ ಮಾಡುತ್ತಿದ್ದಾರೆ.

ಈ ಸಿನಿಮಾ ಮುಗಿಯುತ್ತಿದ್ದಂತೆ ಬಹುನಿರೀಕ್ಷೆಯಲ್ಲಿರುವ ಪುಷ್ಪ-2 ಸಿನಿಮಾದ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುಷ್ಪ-2 ಸಿನಿಮಾದ ಚಿತ್ರೀಕರಣ ಮತ್ತು ಟೈಗರ್ ಶ್ರಾಫ್ ಜೊತೆ ಹೊಸ ಸಿನಿಮಾದ ಚಿತ್ರೀಕರಣ ಎರಡರಲ್ಲೂ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ರಶ್ಮಿಕಾ ನಟನೆಯ ಮಿಷನ್ ಮಜ್ನು, ಗುಡ್ ಬೈ ಸಿನಿಮಾದ ಚಿತ್ರೀಕರಣ ಮುಗಿದಿದ್ದು ಇನ್ನೇನು ಇವೆರಡೂ ತೆರೆ ಕಾಣಲಿದೆ. ‘ಸಿದ್ಧಾರ್ಥ್ ಮಲ್ಹೋತ್ರ’ ನಾಯಕನಾಗಿರುವ ‘ಮಿಷನ್ ಮಜ್ನು’ ಹಾಗೂ ‘ಅಮಿತಾಬ್ ಬಚ್ಚನ್’ ಅಭಿನಯಿಸಿರುವ ‘ಗುಡ್ ಬೈ’ ಸಿನಿಮಾದಲ್ಲಿ ರಶ್ಮಿಕಾ ಕಾಣಿಸಿಕೊಳ್ಳಲಿದ್ದಾರೆ. ಈ ಎರಡು ಸಿನಿಮಾಗಳ ಬಿಡುಗಡೆಗೆ ರಶ್ಮಿಕಾ ಕಾಯುತ್ತಿದ್ದಾರೆ. ಪುಷ್ಪ ಸಿನಿಮಾದ ನಂತರ ರಶ್ಮಿಕಾ ಅಭಿಮಾನಿಗಳು ತಮ್ಮ ನೆಚ್ಚಿನ ನಟಿಯ ಹೊಸ ಚಿತ್ರಕ್ಕಾಗಿ ಕಾಯುತ್ತಿದ್ದಾರೆ.