• June 6, 2022

ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ರಿವೀಲ್ ಮಾಡಿದ ರಿಷಬ್ ಶೆಟ್ಟಿ ಹೇಳಿದ್ದೇನು ಗೊತ್ತಾ?

ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ರಿವೀಲ್ ಮಾಡಿದ ರಿಷಬ್ ಶೆಟ್ಟಿ ಹೇಳಿದ್ದೇನು ಗೊತ್ತಾ?

ಜೊತೆಜೊತೆಯಲಿ ಧಾರಾವಾಹಿಯ ಅನು ಸಿರಿಮನೆ ಈಗ ಹಿರಿತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಧಾರಾವಾಹಿಯಲ್ಲಿಯೇ ಕರ್ನಾಟಕದಾದ್ಯಂತ ಮನೆ ಮಾತಾಗಿರುವ ಕರಾವಳಿ ಮೂಲಕ ಕುವರಿ ಮೇಘಾ ಶೆಟ್ಟಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾ ಮೂಲಕ ಹಿರಿತೆರೆಗೆ ಹಾರಿದರು.

ಡಾರ್ಲಿಂಗ್ ಕೃಷ್ಣ ಜೊತೆಗೆ ದಿಲ್ ಪಸಂದ್ ಎನ್ನುತ್ತಿರುವ ಮೇಘಾ ಶೆಟ್ಟಿ ಸಡಗರ ರಾಘವೇಂದ್ರ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ವಿಚಾರ ಇತ್ತೀಚೆಗಷ್ಟೇ ಬಹಿರಂಗಗೊಂಡಿತ್ತು. ಕವೀಶ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ಈ ಸಿನಿಮಾದ ಟೈಟಲ್ ನ್ನು ರಿಷಬ್ ಶೆಟ್ಟಿ ರಿವೀಲ್ ಮಾಡಿದ್ದಾರೆ.

ಮೇಘಾ ಶೆಟ್ಟಿ ಹಾಗೂ ಕವೀಶ್ ಶೆಟ್ಟಿ ಜೋಡಿಯಾಗಿ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾಕ್ಕೆ ಆಪ್ಟರ್ ಆಪರೇಶನ್ ಲಂಡನ್ ಕೆಫೆ ಎಂದು ಹೆಸರಿಡಲಾಗಿದೆ. ಸಿನಿಮಾದ ಹೆಸರನ್ನು ರಿವೀಲ್ ಮಾಡಿದ್ದ ರಿಷಬ್ ಶೆಟ್ಟಿ ಅವರು “ಸಡಗರ ರಾಘವೇಂದ್ರ ಅವರು ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಅವರಿಗೆ ಶುಭ ಹಾರೈಕೆಗಳು. ನಾಯಕಿ ಮೇಘಾ ಶೆಟ್ಟಿ, ನಾಯಕ ಕವೀಶ್ ಶೆಟ್ಟಿ ಅವರ ಜೊತೆಗೆ ನಿರ್ಮಾಪಕರು, ಉಳಿದಿರುವ ಕಲಾವಿದರುಗಳು ಹಾಗೂ ತಂತ್ರಜ್ಞರಿಗೂ ಕೂಡಾ ಶುಭವಾಗಲಿ” ಎಂದು ಹಾರೈಸಿದ್ದಾರೆ.

ಅಂದ ಹಾಗೇ ‘ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಸಿನಿಮಾವು ಕನ್ನಡ ಮಾತ್ರವಲ್ಲದೇ ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಲಿದೆ. ಈಗಾಗಲೇ ಈ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದೆ. ನಾಯಕ ಕವೀಶ್ ಶೆಟ್ಟಿ ಹುಟ್ಟುಹಬ್ಬದಂದು ಸಿನಿಮಾದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಒಟ್ಟಿನಲ್ಲಿ ಮಗದೊಂದು ಫ್ಯಾನ್ ಇಂಡಿಯಾ ಸಿನಿಮಾ ನೋಡುವ ಸುವರ್ಣಾವಕಾಶ ವೀಕ್ಷಕರಿಗೆ ಶೀಘ್ರದಲ್ಲಿ ದೊರಕಿಲಿದೆ.